ADVERTISEMENT

ಬಾಲಮಂದಿರದಲ್ಲಿನ ಮಕ್ಕಳಿಗೆ ಕೋವಿಡ್‌: ಮಾಹಿತಿ ನೀಡಲು ಎನ್‌ಸಿಪಿಸಿಆರ್‌ ಸೂಚನೆ

ಪಿಟಿಐ
Published 22 ಏಪ್ರಿಲ್ 2021, 11:15 IST
Last Updated 22 ಏಪ್ರಿಲ್ 2021, 11:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದ ಬಾಲಮಂದಿರಗಳಲ್ಲಿರುವವರ ಪೈಕಿ ಎಷ್ಟು ಮಕ್ಕಳಲ್ಲಿ ಕಳೆದ ತಿಂಗಳು ಕೋವಿಡ್‌–19 ಕಾಣಿಸಿಕೊಂಡಿದೆ ಎಂಬ ಮಾಹಿತಿ ನೀಡುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಎಲ್ಲ ರಾಜ್ಯಗಳಿಗೆ ಸೂಚಿಸಿದೆ.

ಈ ಕುರಿತು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಆಯೋಗದ ಅಧ್ಯಕ್ಷ ಪ್ರಿಯಾಂಕ್‌ ಕನುಂಗೊ, ಕೋವಿಡ್‌–19 ಪಿಡುಗು ವ್ಯಾಪಕವಾಗುತ್ತಿರುವ ಈ ಸಮಯದಲ್ಲಿ ಬಾಲಮಂದಿರಗಳಲ್ಲಿರುವ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ಹೇಳಿದ್ದಾರೆ.

ಬಾಲಮಂದಿರಗಳಲ್ಲಿರುವ ಮಕ್ಕಳಲ್ಲಿಯೂ ಕೋವಿಡ್‌–19 ಕಂಡುಬಂದಿದೆ ಎಂಬುದಾಗಿ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಈ ಮಾಹಿತಿ ಕೇಳಲಾಗಿದೆ ಎಂದು ಆಯೋಗ ತಿಳಿಸಿದೆ.

ADVERTISEMENT

ಆರೈಕೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಲ್ಲಿ (ಸಿಎನ್‌ಸಿಪಿ) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳಲ್ಲಿ (ಸಿಐಸಿಎಲ್‌) ಎಷ್ಟು ಮಕ್ಕಳಿಗೆ ಕೋವಿಡ್‌ ದೃಢಪಟ್ಟಿದೆ ಎಂಬ ಮಾಹಿತಿಯನ್ನು ನೀಡುವಂತೆಯೂ ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.