ADVERTISEMENT

ಸಂಸದ ಅಸಾದುದ್ದೀನ್ ಓವೈಸಿ ಮನೆಯ ಗಾಜುಗಳು ಒಡೆದ ಸ್ಥಿತಿಯಲ್ಲಿ ಪತ್ತೆ

ಪಿಟಿಐ
Published 14 ಆಗಸ್ಟ್ 2023, 6:32 IST
Last Updated 14 ಆಗಸ್ಟ್ 2023, 6:32 IST
ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ
ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ    

ನವದೆಹಲಿ: ಎಐಎಂಐಎಂ ಅಧ್ಯಕ್ಷ ಹಾಗೂ ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿಯವರ ದೆಹಲಿ ನಿವಾಸದ ಬಾಗಿಲಿನ ಎರಡು ಗಾಜುಗಳು ಒಡೆದಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಗಾಜು ಒಡೆದ ಸ್ಥಳದಲ್ಲಿ ಕಲ್ಲು ಅಥವಾ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಸ್ಥಳದಲ್ಲಿ ತಪಾಸಣೆ ನಡೆಸುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಇದೇ ವರ್ಷ ಫೆಬ್ರುವರಿ ತಿಂಗಳಲ್ಲಿ ದೆಹಲಿಯ ತಮ್ಮ ನಿವಾಸದ ಮೇಲೆ ಅನಾಮಿಕ ದುಷ್ಕರ್ಮಿಗಳು ದಾಳಿ ನಡೆಸಿದ್ದರು ಎಂದು ಓವೈಸಿ ಆರೋಪಿಸಿದ್ದರು. ಅಲ್ಲದೆ 2014ರ ಬಳಿಕ ಇದು ನಾಲ್ಕನೇ ದಾಳಿ ಎಂದು ಹೇಳಿದ್ದರು.

2022ರ ಫೆಬ್ರುವರಿ ತಿಂಗಳಿನಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ತೆರಳಿ ದೆಹಲಿಗೆ ವಾಪಸ್‌ ಆಗುವ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.