ADVERTISEMENT

ಗೋವಾ ಚುನಾವಣೆ: ಅಪರಾಧ ಹಿನ್ನೆಲೆಯ ಶೇ 26ರಷ್ಟು ಅಭ್ಯರ್ಥಿಗಳು ಕಣದಲ್ಲಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2022, 18:55 IST
Last Updated 13 ಫೆಬ್ರುವರಿ 2022, 18:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗೋವಾ ವಿಧಾನಸಭಾ ಚುನಾವಣೆಯ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಶೇ 26ರಷ್ಟು ಮಂದಿಯ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ತನ್ನ ವರದಿಯಲ್ಲಿ ಹೇಳಿದೆ. ಅಭ್ಯರ್ಥಿಗಳು ತಮ್ಮ ನಾಮಪತ್ರದಲ್ಲಿ ನಮೂದಿಸಿರುವ ವಿವರಗಳನ್ನು ಪರಿಶೀಲಿಸಿ ಎಡಿಆರ್‌ ಈ ವರದಿಯನ್ನು ಸಿದ್ಧಪಡಿಸಿದೆ.

*ಮಹಿಳೆಯರ ಮೇಲೆ ಎಸಗಿದ ದೌರ್ಜನ್ಯ, ವಂಚನೆ ಪ್ರಕರಣಗಳಲ್ಲಿ 12 ಅಭ್ಯರ್ಥಿಗಳು ಆರೋಪಿಗಳಾಗಿದ್ದಾರೆ. ಒಬ್ಬ ಅಭ್ಯರ್ಥಿಯ ವಿರುದ್ಧ ಅತ್ಯಾಚಾರದ ಆರೋಪವೂ ಇದೆ

*ಕಣದಲ್ಲಿರುವ 8 ಅಭ್ಯರ್ಥಿಗಳ ವಿರುದ್ಧ ಕೊಲೆಯತ್ನ ಪ್ರಕರಣಗಳು ದಾಖಲಾಗಿವೆ

ADVERTISEMENT

*ಕಣದಲ್ಲಿರುವ ಒಟ್ಟು ಅಭ್ಯರ್ಥಿ ಗಳಲ್ಲಿ 168 (ಶೇ 61ರಷ್ಟು) ಅಭ್ಯರ್ಥಿಗಳು ತಾವು ಕೋಟ್ಯಧಿಪತಿಗಳು ಎಂದು ಘೋಷಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.