ನವದೆಹಲಿ: ಇಂದು ಗೋವಾ ವಿಧಾನಸಭೆಗೆ ಮತದಾನ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಮತ ಚಲಾಯಿಸಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.
‘ಗೋವಾದ ಆತ್ಮೀಯ ನಾಗರಿಕರೇ, ಈ ಭ್ರಷ್ಟ ವ್ಯವಸ್ಥೆಯನ್ನು ಬದಲಿಸಿ, ಗೋವಾ ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಶಕ್ತಿ ನಿಮ್ಮಲ್ಲಿದೆ. ದಯವಿಟ್ಟು ಇಂದು ಹೊರಬನ್ನಿ ಮತ್ತು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಮತ ಚಲಾಯಿಸಿ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಗೋವಾದ 40 ವಿಧಾನಸಭಾ ಕ್ಷೇತ್ರಗಳಲ್ಲಿ 301 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈವರೆಗೆ, ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ನೇರ ಸ್ಪರ್ಧೆ ಇತ್ತು. ಈ ಬಾರಿ ಆಮ್ ಆದ್ಮಿ ಪಕ್ಷ, ತೃಣಮೂಲ ಕಾಂಗ್ರೆಸ್ ಪಕ್ಷಗಳು ಸ್ಪರ್ಧೆಗೆ ಇಳಿದಿವೆ. ಹಾಗಾಗಿ, ಬಹುಕೋನ ಸ್ಪರ್ಧೆ ಏರ್ಪಟ್ಟಿದೆ. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.