ADVERTISEMENT

ಗೋವಾ | ಶಿರ್ಗಾಂವ್‌ ದೇಗುಲದಲ್ಲಿ ಕಾಲ್ತುಳಿತ: ತನಿಖೆಗೆ ಸಿಎಂ ಆದೇಶ

ಪಿಟಿಐ
Published 3 ಮೇ 2025, 6:29 IST
Last Updated 3 ಮೇ 2025, 6:29 IST
   

ಪಣಜಿ: ಉತ್ತರ ಗೋವಾದ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ತನಿಖೆ ನಡೆಸಲಾಗುವುದು ಎಂದು ಗೋವಾಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಅಲ್ಲದೇ ‌ತನಿಖಾ ವರದಿಯನ್ನು ಬಹಿರಂಗಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪಣಜಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಶಿರ್ಗಾಂವ್‌ ಗ್ರಾಮದಲ್ಲಿರುವ ಶ್ರೀ ಲೈರಾಯಿ ದೇವಿ ದೇಗುಲದ ವಾರ್ಷಿಕ ಉತ್ಸವ ಹಿನ್ನೆಲೆ ಕನಿಷ್ಠ 30 ಸಾವಿರರಿಂದ 40 ಸಾವಿರ ಜನ ಸೇರಿದ್ದರು. ಇಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 6 ಜನ ಮೃತಪಟ್ಟು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಾವಂತ್, ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ನಾನು ಸೂಚಿಸಿದ್ದೇನೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.