ಪ್ರಾತಿನಿಧಿಕ ಚಿತ್ರ
ಪಣಜಿ: ಮಾಜಿ ಪ್ರೇಯಸಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಿರುವುದಾಗಿ ಗೋವಾ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಆರೋಪಿಯನ್ನು ಮೊಹಮದ್ ಸಾಧಿಮ್ ಎಂದು ಗುರುತಿಸಲಾಗಿದೆ. ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿದೆ ಎಂದು ಸೈಬರ್ ಅಪರಾಧ ವಿಭಾಗದ ಪೊಲೀಸರು ಹೇಳಿದ್ದಾರೆ.
ದೂರು ನೀಡಿದ ಯುವತಿಯು ಉತ್ತರ ಗೋವಾ ನಿವಾಸಿಯಾದ ಸಾಧಿಮ್ ಜೊತೆಗಿನ ಸಂಬಂಧವನ್ನು ಇತ್ತೀಚೆಗೆ ಮುರಿದುಕೊಂಡಿದ್ದರು. ಇದರಿಂದ ಸಿಟ್ಟಾದ ಆರೋಪಿ, ಯುವತಿಯ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು, ಆಕೆಯ ಸ್ನೇಹಿತರೊಂದಿಗೆ ಖಾಸಗಿ ಚಿತ್ರಗಳನ್ನು ಹಂಚಿಕೊಂಡಿದ್ದ.
'ಸಮಗ್ರ ತನಿಖೆ ಮತ್ತು ತಾಂತ್ರಿಕ ಅಂಶಗಳನ್ನು ವಿಶ್ಲೇಷಣೆ ನಂತರ ಆರೋಪಿಯನ್ನು ಪತ್ತೆ ಮಾಡಲಾಗಿದೆ. ಮಾರ್ಗೌ ಮತ್ತು ಪಣಜಿಯಲ್ಲಿ ಶೋಧ ನಡೆಸಿ ಆತನನ್ನು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.