ADVERTISEMENT

ಕೋವಿಡ್‌ ಹೆಚ್ಚಳ: ಗೋವಾದಲ್ಲಿ ಮೇ 31 ರವರೆಗೆ ಲಾಕ್‌ಡೌನ್ ವಿಸ್ತರಣೆ

ಏಜೆನ್ಸೀಸ್
Published 21 ಮೇ 2021, 10:43 IST
Last Updated 21 ಮೇ 2021, 10:43 IST
ಪ್ರಮೋದ್‌ ಸಾವಂತ್‌
ಪ್ರಮೋದ್‌ ಸಾವಂತ್‌   

ಪಣಜಿ: ಗೋವಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣಕ್ಕೆ ಮೇ 31 ರವರೆಗೆ ಲಾಕ್‌ಡೌನ್‌ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಹೇಳಿದ್ದಾರೆ.

ಶುಕ್ರವಾರ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ‘ರಾಜ್ಯದಲ್ಲಿ ಮೇ 31 ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ್ದೇವೆ. ಕಠಿಣ ನಿಯಮಗಳು ಹಾಗೆಯೇ ಮುಂದುವರಿಯಲಿವೆ’ ಎಂದು ತಿಳಿಸಿದ್ದಾರೆ.

ಗೋವಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಮೇ 3 ರಿಂದ ಮೇ 23 ರವರೆಗೆ ಲಾಕ್‌ಡೌನ್‌ ಘೋಷಿಸಲಾಗಿತ್ತು.

ADVERTISEMENT

ಅಗತ್ಯ ವಸ್ತುಗಳು ಖರೀದಿ ಹಾಗೂ ಮದ್ಯ ಮಾರಾಟಕ್ಕೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ರವರೆಗೆ ಅನುಮತಿ ನೀಡಲಾಗಿದೆ.

ಗೋವಾದಲ್ಲಿ ಗುರುವಾರ 1,582 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಸೋಂಕಿತರ ಸಂಖ್ಯೆ 1,47,567ಕ್ಕೆ ಏರಿಕೆಯಾಗಿದ್ದು, ಈವರೆಗೆ 2,272 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.