ADVERTISEMENT

‘ಮನ್ ಕಿ ಬಾತ್’ ಮಾದರಿಯಲ್ಲಿ ‘ಗೋವಾ ಕಿ ಬಾತ್’: ಪ್ರಮೋದ್ ಸಾವಂತ್

ಪಿಟಿಐ
Published 22 ಫೆಬ್ರುವರಿ 2023, 4:37 IST
Last Updated 22 ಫೆಬ್ರುವರಿ 2023, 4:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಣಜಿ: ಸರ್ಕಾರದ ವಿವಿಧ ಯೋಜನೆಗಳ ಪ್ರಚಾರಕ್ಕಾಗಿ ಗೋವಾ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಮಾದರಿಯಲ್ಲಿ ‘ಗೋವಾ ಕಿ ಬಾತ್’ ಎಂಬ ವಿನೂತನ ಕಾರ್ಯಕ್ರಮ ಪರಿಚಯಿಸಲಿದೆ.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸರ್ಕಾರದ ವಿವಿಧ ಯೋಜನೆಗಳ ಪ್ರಚಾರಕ್ಕಾಗಿ ಗೋವಾ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಮಾದರಿಯಲ್ಲಿ ‘ಗೋವಾ ಕಿ ಬಾತ್’ ಕಾರ್ಯಕ್ರಮವನ್ನು ಪ್ರತಿ ತಿಂಗಳ ಮೂರನೇ ಶನಿವಾರ ಆಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ ‘ಮನ್ ಕಿ ಬಾತ್’ನ 95ನೇ ಆವೃತ್ತಿಯಲ್ಲಿ ಮಾತನಾಡಿದ್ದ ಮೋದಿ, ‘ನಮ್ಮ ದೇಶವು ವಿಶ್ವದ ಅತ್ಯಂತ ಹಳೆಯ ಸಂಪ್ರದಾಯಗಳಿಗೆ ನೆಲೆಯಾಗಿದೆ ಎಂದು ಹೇಳಿದ್ದರು. ಆದ್ದರಿಂದ ನಮ್ಮ ಸಂಪ್ರದಾಯಗಳು ಮತ್ತು ಸಾಂಪ್ರದಾಯಿಕ ಜ್ಞಾನವನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದಿದ್ದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವಾದ ‘ಮನ್ ಕಿ ಬಾತ್’ ಹೆಚ್ಚು ಜನಪ್ರಿಯತೆಯನ್ನು ಪಡೆದಿದೆ. ಜನರೊಂದಿಗೆ ಸಂಪರ್ಕ ಸಾಧಿಸಲು ಮನ್ ಕಿ ಬಾತ್‌(ಮನದ ಮಾತು) ಒಂದು ಉತ್ತಮ ಸಾಧನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.