ADVERTISEMENT

ಸೋನಾಲಿ ಸಾವಿನ ಪ್ರಕರಣ: ಸಿಬಿಐಗೆ ವಹಿಸಲು ಕೇಂದ್ರಕ್ಕೆ ಮನವಿ

ಪಿಟಿಐ
Published 12 ಸೆಪ್ಟೆಂಬರ್ 2022, 10:57 IST
Last Updated 12 ಸೆಪ್ಟೆಂಬರ್ 2022, 10:57 IST
ಸೋನಾಲಿ ಫೋಗಾಟ್
ಸೋನಾಲಿ ಫೋಗಾಟ್   

ಪಣಜಿ: ‘ಬಿಜೆಪಿ ನಾಯಕಿ ಸೋನಾಲಿ ಫೋಗಾಟ್ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕೋರಿ ಗೋವಾ ಸರ್ಕಾರವು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆಯಲಿದೆ’ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ.

ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್ ಅವರು, ‘ಗೋವಾ ಪೊಲೀಸರು ಪ್ರಕರಣದ ಕುರಿತು ಅತ್ಯುತ್ತಮವಾಗಿ ತನಿಖೆ ಮಾಡಿದ್ದಾರೆ. ಕೆಲವು ಸುಳಿವುಗಳನ್ನೂ ಪತ್ತೆ ಮಾಡಿದ್ದಾರೆ. ಆದರೆ, ಸೋನಾಲಿ ಅವರ ಮಗಳ ಬೇಡಿಕೆ ಹಾಗೂ ಹರಿಯಾಣದ ಜನತೆಯ ಒತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ನಾವು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆಯುತ್ತೇವೆ’ ಎಂದು ತಿಳಿಸಿದ್ದಾರೆ.

ಹರಿಯಾಣದ ಹಿಸಾರ್‌ನ ಬಿಜೆಪಿ ನಾಯಕಿ ಸೋನಾಲಿ ಫೋಗಾಟ್ ಅವರು ಆಗಸ್ಟ್‌ನಲ್ಲಿ ಗೋವಾದಲ್ಲಿ ಅನುಮಾನಸ್ಪದವಾಗಿ ಸಾವಿಗೀಡಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಸೋನಾಲಿ ಅವರ ಇಬ್ಬರು ಸಹಾಯಕರು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.