ADVERTISEMENT

ಗೋವಾ: ಪಕ್ಷೇತರ ಶಾಸಕ ಕಾಂಗ್ರೆಸ್‌ಗೆ?

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 20:03 IST
Last Updated 9 ಜನವರಿ 2022, 20:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಂಡೀಗಡ:ಗೋವಾದ ಪಕ್ಷೇತರ ಶಾಸಕ ಪ್ರಸಾದ್‌ ಗಾಂವ್ಕರ್‌ ಅವರು ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ, 40 ಸದಸ್ಯಬಲದ ಗೋವಾ ವಿಧಾನಸಭೆಯ ಸದಸ್ಯರ ಸಂಖ್ಯೆ 33ಕ್ಕೆ ಕುಸಿದಿದೆ. ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಾಗಿ ಗಾಂವ್ಕರ್‌ ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚಿನವರು ಬಿಜೆಪಿ ಸೇರಿದ್ದಾರೆ. ಈಗ ಕಾಂಗ್ರೆಸ್ ಶಾಸಕರ ಸಂಖ್ಯೆ ಎರಡು ಮಾತ್ರ.

ವಿಧಾನಸಭೆಗೆ ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ನೀಡಲಾಗುವ ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಇರುವುದಿಲ್ಲ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ಈ ಬದಲಾವಣೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.