
ಪಣಜಿ: ಉತ್ತರ ಗೋವಾದ ಬರ್ಚ್ ಬೈ ರೋಮಿಯೊ ಲೇನ್ ನೈಟ್ ಕ್ಲಬ್‌ನ ನಾಲ್ವರು ಸಹ ಮಾಲೀಕರಲ್ಲಿ ಒಬ್ಬರಾದ ಅಜಯ್ ಗುಪ್ತಾ ಅವರು ಜಾಮೀನು ಕೋರಿ ಮಾಪುಸಾ ಪಟ್ಟಣದ ನ್ಯಾಯಾಲಯದಲ್ಲಿ ಇಂದು (ಗುರುವಾರ) ಅರ್ಜಿ ಸಲ್ಲಿಸಿದ್ದಾರೆ.
ಗುಪ್ತಾ ಅವರನ್ನು ಡಿಸೆಂಬರ್ 10ರಂದು ನವದೆಹಲಿಯಲ್ಲಿ ಗೋವಾ ಪೊಲೀಸರು ಬಂಧಿಸಿದ್ದರು. ಬಳಿಕ ಮಾಪುಸಾ ನ್ಯಾಯಾಲಯ ಅವರನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.
ಡಿಸೆಂಬರ್ 6ರ ಮಧ್ಯರಾತ್ರಿ ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 25 ಮಂದಿ ಮೃತಪಟ್ಟಿದ್ದರು. ಘಟನೆ ಸಂಬಂಧ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂಥ್ರಾ ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.