
ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್
ಪಣಜಿ: ಗೋವಾದ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ.
ಅಲ್ಲದೆ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್
ಉತ್ತರ ಗೋವಾದ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 25 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.
'ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ. ದುರಂತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ' ಎಂದು ಸಿಎಂ ಸಾವಂತ್ ತಿಳಿಸಿದ್ದಾರೆ.
'ಗೋವಾದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು. ಕ್ಲಬ್‌ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಜನದಟ್ಟಣೆ ಹಾಗೂ ಕಿರಿದಾದ ಪ್ರದೇಶದಿಂದಾಗಿ ಜನರಿಗೆ ಹೊರಗೆ ಹೋಗಲು ಸಾಧ್ಯವಾಗಲಿಲ್ಲ' ಎಂದು ಅವರು ತಿಳಿಸಿದ್ದಾರೆ.
'ನೈಟ್ ಕ್ಲಬ್‌ನಲ್ಲಿ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗಿಲ್ಲ. ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ.
ಗೋವಾ ನೈಟ್ ಕ್ಲಬ್ ಬೆಂಕಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಳಿಗೆ ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ಬಿಡುಗಡೆ ಮಾಡಲಾಗಿದ್ದು, ಗಾಯಾಳುಗಳಿಗೆ ತಲಾ ₹50,000 ನೀಡಲಾಗುವುದು ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.