
ಗೋವಾದ ಅರ್ಪೋರಾ ಗ್ರಾಮದಲ್ಲಿನ ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಹೊತ್ತಿ ಉರಿದ ನೈಟ್‌ಕ್ಲಬ್
ಪಣಜಿ/ನವದೆಹಲಿ: ‘ಉತ್ತರ ಗೋವಾದ ‘ಬರ್ಚ್ ಬೈ ರೋಮಿಯೊ ಲೇನ್’ ನೈಟ್‌ಕ್ಲಬ್‌ನಲ್ಲಿ ಶನಿವಾರ ರಾತ್ರಿ ಸಂಭವಿಸಿದ್ದ ಭಾರಿ ಅಗ್ನಿ ಅವಘಡದ ಬೆನ್ನಲ್ಲೇ, ಮಾಲೀಕರಾದ ಸೌರಭ್ ಹಾಗೂ ಗೌರವ್ ಲೂಥ್ರಾ ಥಾಯ್ಲೆಂಡ್‌ಗೆ ಪರಾರಿಯಾಗಿದ್ದಾರೆ. ಅವರನ್ನು ವಶಕ್ಕೆ ಪಡೆಯಲು ಇಂಟರ್‌ಫೋಲ್ ನೆರವು ಪಡೆಯಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಡಿಸೆಂಬರ್ 7ರ ಬೆಳಿಗ್ಗೆ 5.30ಕ್ಕೆ ಇಂಡಿಗೊ ಏರ್‌ಲೈನ್ಸ್‌ನ 6ಇ–1073 ವಿಮಾನದಲ್ಲಿ ಫುಕೆಟ್ ನಗರಕ್ಕೆ ಪ್ರಯಾಣಿಸಿರುವುದು ವಲಸೆ ದಾಖಲೆಗಳಲ್ಲಿ ಕಂಡುಬಂದಿದೆ. ಈಗ ಅವರನ್ನು ವಶಕ್ಕೆ ಪಡೆದು ಬಂಧಿಸಲು ಇಂಟರ್‌ಪೋಲ್ ನೆರವು ಪಡೆಯಲು ನಿರ್ಧರಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವ್ಯಾಪಕ ಶೋಧ: ದೆಹಲಿಯ ಹಡ್ಸನ್ ಲೇನ್‌ನಲ್ಲಿರುವ ಲೂಥ್ರಾ ಸಹೋದರರ ನಿವಾಸಕ್ಕೆ ಗೋವಾ ಪೊಲೀಸರ ತಂಡ ಸೋಮವಾರ ಭೇಟಿ ನೀಡಿ ಪರಿಶೀಲಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.