ನವದೆಹಲಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸಂಸತ್ತು ಸೋಮವಾರ ಅಂಗೀಕರಿಸಿತು.
‘ಗೋವಾ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಪ್ರಾತಿನಿಧ್ಯ ತಿದ್ದುಪಡಿ ಮಸೂದೆ’ಗೆ ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರ ನೀಡಲಾಯಿತು. ಲೋಕಸಭೆಯು ಆಗಸ್ಟ್ 5ರಂದೇ ಮಸೂದೆಗೆ ಅಂಗೀಕಾರ ನೀಡಿತ್ತು.
‘ಗೋವಾದಲ್ಲಿ 40 ವಿಧಾನಸಭಾ ಕ್ಷೇತ್ರಗಳಿವೆ. ಒಂದು ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ ಮೀಸಲಿಡಲಾಗಿದೆ. ರಾಜ್ಯದಲ್ಲಿ ಈ ಸಮುದಾಯದ ಜನಸಂಖ್ಯೆ 25,494. 2001ರ ಜನಗಣತಿ ಪ್ರಕಾರ ಪರಿಶಿಷ್ಟ ಪಂಗಡದ ಜನಸಂಖ್ಯೆ 566. ಹೀಗಾಗಿ ಚುನಾವಣೆಯಲ್ಲಿ ಯಾವುದೇ ಮೀಸಲಾತಿ ಇರಲಿಲ್ಲ. ಈ ಮಸೂದೆಯು ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡದ ಪ್ರಾತಿನಿಧ್ಯಕ್ಕೆ ಅವಕಾಶ ನೀಡಲಿದೆ’ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.