(ಪ್ರಾತಿನಿಧಿಕ ಚಿತ್ರ)
ಅಹಮದಾಬಾದ್: 2002ರಲ್ಲಿ ಗೋಧ್ರಾದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್ ರೈಲು ಬೋಗಿಗಳಿಗೆ ಬೆಂಕಿ ಹಂಚಿದ್ದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಮೂವರನ್ನು ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಬಾಲ ನ್ಯಾಯ ಮಂಡಳಿಯು (ಜೆಜೆಬಿ) ಮೂರು ವರ್ಷಗಳ ಕಾಲ ವೀಕ್ಷಣಾಲಯಕ್ಕೆ ಕಳುಹಿಸಿದೆ.
ಪ್ರಕರಣ ನಡೆದು 23 ವರ್ಷಗಳ ನಂತರ ತೀರ್ಪು ಹೊರಬಿದ್ದಿದೆ. ಘಟನೆ ನಡೆದ ಸಂದರ್ಭದಲ್ಲಿ ಈ ಮೂವರು 18 ವರ್ಷಕ್ಕಿಂತ ಕೆಳಗಿನವರಾಗಿದ್ದರು. ಬೆಂಕಿ ಹಂಚಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾದವರಲ್ಲಿ ಕಾನೂನಿನ ಜೊತೆ ಸಂಘರ್ಷಕ್ಕೆ ಒಳಗಾದ ಒಟ್ಟು ಐವರು ಬಾಲಕರು ಇದ್ದರು.
ಒಬ್ಬ ಆರೋಪಿ ವಿಚಾರಣೆ ಅವಧಿಯಲ್ಲಿ ಮೃತಪಟ್ಟರೆ, ಇನ್ನೊಬ್ಬನನ್ನು ಜೆಜೆಬಿ ಖುಲಾಸೆಗೊಳಿಸಿದೆ. ಮಂಗಳವಾರ ತೀರ್ಪು ಪ್ರಕಟಿಸಿದ ಗೋಧ್ರಾ ಜೆಜೆಬಿ ಪ್ರಧಾನ ಮ್ಯಾಜಿಸ್ಟ್ರೇಟ್ ಕೆ.ಎಸ್.ಮೋದಿ ಅವರು ಮೂವರಿಗೂ ತಲಾ ₹15 ಸಾವಿರ ದಂಡ ವಿಧಿಸಿದರು.
2002 ಫೆಬ್ರುವರಿ 27ರಂದು ಗೋಧ್ರಾದಲ್ಲಿ ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದ ಪರಿಣಾಮ 59 ಮಂದಿ ಮೃತಪಟ್ಟಿದ್ದರು. ಬಳಿಕ ರಾಜ್ಯದಾದ್ಯಂತ ಗಲಭೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.