ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಿರುವ ‘ಕೊವ್ಯಾಕ್ಸಿನ್’ ಲಸಿಕೆ ಉತ್ಪಾದನೆಯ ವೇಗ ಹೆಚ್ಚಿಸಲು ಹಣಕಾಸು ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಬುಧವಾರ ಹೇಳಿದೆ.
‘ಭಾರತ್ ಬಯೋಟೆಕ್’ ಕಂಪನಿಯ ಬೆಂಗಳೂರಿನ ಹೊಸ ಘಟಕಕ್ಕೆ ಅಂದಾಜು ₹65 ಕೋಟಿ ಹಣಕಾಸು ನೆರವು ಘೋಷಿಸಲಾಗಿದೆ. ಲಸಿಕೆ ಉತ್ಪಾದನೆ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಮೂರು ಸರ್ಕಾರಿ ಸ್ವಾಮ್ಯದ ಕಂಪನಿಗಳೂ ಬೆಂಬಲ ನೀಡಿವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹೇಳಿರುವುದಾಗಿ ‘ಎಎನ್‌ಐ’ ಟ್ವೀಟ್ ಮಾಡಿದೆ.
ಕೊವ್ಯಾಕ್ಸಿನ್ ಲಸಿಕೆಯ ಈಗಿನ ಉತ್ಪಾದನಾ ಸಾಮರ್ಥ್ಯವನ್ನು ಮೇ–ಜೂನ್ ಅವಧಿಗೆ ದ್ವಿಗುಣಗೊಳಿಸಲಾಗುವುದು. ಜುಲೈ–ಆಗಸ್ಟ್ ಅವಧಿ ವೇಳೆಗೆ ಉತ್ಪಾದನಾ ಸಾಮರ್ಥ್ಯವನ್ನು 6–7 ಪಟ್ಟು ಹೆಚ್ಚಿಸಲಾಗುವುದು. ಸೆಪ್ಟೆಂಬರ್ ವೇಳೆಗೆ ಉತ್ಪಾದನಾ ಸಾಮರ್ಥ್ಯವನ್ನು ತಿಂಗಳಿಗೆ 10 ಕೋಟಿ ಡೋಸ್‌ಗೆ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಸಚಿವಾಲಯ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.