ADVERTISEMENT

ದೆಹಲಿ|ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹1.34 ಕೋಟಿ ಮೌಲ್ಯದ ಚಿನ್ನ ವಶ:ಬಂಧನ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 15:19 IST
Last Updated 8 ಜುಲೈ 2025, 15:19 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ನವದೆಹಲಿ: ನಗರದ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ಡಾಣದಲ್ಲಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ ₹1.34 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್‌ ಇಲಾಖೆ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಶಾರ್ಜಾ (ಯುನೈಟೆಡ್ ಅರಬ್ ಎಮಿರೇಟ್ಸ್)ನಿಂದ ಬಂದ ಭಾರತೀಯ ಪ್ರಯಾಣಿಕನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಆರೋಪಿ ಮತ್ತು ಆತನ ಬ್ಯಾಗ್‌ನನ್ನು ತೀವ್ರ ಪರೀಶಿಲನೆಗೆ ಒಳಪಡಿಸಿದಾಗ ಹಳದಿ ಬಣ್ಣದ ಪೇಸ್ಟ್‌ ಮಾದರಿಯ ಎರಡು ಚೀಲಗಳು ಪತ್ತೆಯಾಗಿವೆ ಎಂದು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪೇಸ್ಟ್‌ನಿಂದ 1,484.5 ಗ್ರಾಂ ತೂಕದ ಮೂರು ಗೋಲ್ಡ್‌ ಬಾರ್‌ಗಳನ್ನು ಹೊರತೆಗೆಯಲಾಗಿದೆ. ಇದರ ಒಟ್ಟು ಮೌಲ್ಯ ₹1,34,87,395 ಆಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ವಿಚಾರಣೆಯ ಆಧಾರದ ಮೇಲೆ, ಚಿನ್ನವನ್ನು ಪಡೆದ ಮತ್ತೊಬ್ಬ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.