ADVERTISEMENT

ಚಿನ್ನ ಕಳ್ಳಸಾಗಣೆ: ಬಂಧನ

ಪಿಟಿಐ
Published 1 ಫೆಬ್ರುವರಿ 2019, 18:32 IST
Last Updated 1 ಫೆಬ್ರುವರಿ 2019, 18:32 IST

ನವದೆಹಲಿ: ₹ 66 ಲಕ್ಷ ಮೌಲ್ಯದ ಚಿನ್ನ ಕಳ್ಳಸಾಗಣೆಗೆ ಪ್ರಯತ್ನಿಸಿದ ವ್ಯಕ್ತಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

38 ವರ್ಷದ ವ್ಯಕ್ತಿ ಗುರುವಾರ ಹಾಂಕಾಂಗ್‌ನಿಂದ ಬಂದಿದ್ದ ಎನ್ನಲಾಗಿದೆ. ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದಾಗ ಶೂನಲ್ಲಿ ಬಚ್ಚಿಟ್ಟುಕೊಂಡಿದ್ದ ತಲಾ ಒಂದು ಕೆ.ಜಿ ತೂಕದ ಎರಡು ಚಿನ್ನದ ಗಟ್ಟಿಗಳು ಸಿಕ್ಕಿವೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ. ಉದ್ಯಮಿ ಎಂದು ಹೇಳುತ್ತಿರುವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT