
ಪಿಟಿಐ
ಪ್ರಾತಿನಿಧಿಕ ಚಿತ್ರ
ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ₹ 1 ಕೋಟಿ ಮೌಲ್ಯದ ಏಳು ಚಿನ್ನದ ಬಿಸ್ಕತ್‌ಗಳನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬುಧವಾರ ವಶಕ್ಕೆ ಪಡೆದಿದೆ.
ಗುಪ್ತಚರ ಮೂಲಗಳಿಂದ ಲಭ್ಯವಾದ ಖಚಿತ ಮಾಹಿತಿ ಆಧರಿಸಿ, ಭಾರತ ಮತ್ತು ಬಾಂಗ್ಲಾದೇಶದ ಗಡಿಯಲ್ಲಿ ನಿಯೋಜಿಸಲಾಗಿರುವ 119ನೇ ಬೆಟಾಲಿಯನ್ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದರು ಎಂದು ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.
ಚಿನ್ನದ ಬಿಸ್ಕತ್‌ಗಳನ್ನು ಸೈಕಲ್‌ನಲ್ಲಿ ಬಚ್ಚಿಡಲಾಗಿತ್ತು. ಸವಾರ, ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದಾನೆ ಎಂದು ಬಿಎಸ್‌ಎಫ್ ಹೇಳಿಕೆ ಬಿಡುಗಡೆ ಮಾಡಿದೆ.
ವಶಪಡಿಸಿಕೊಳ್ಳಲಾಗಿರುವ ಚಿನ್ನದ ಬಿಸ್ಕೆಟ್‌ಗಳು ಒಟ್ಟು 816.41 ಗ್ರಾಂ ಇದ್ದು, ಮಾರುಕಟ್ಟೆ ಮೌಲ್ಯ ₹ 1.02 ಕೋಟಿ ಎಂದು ಅಂದಾಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.