ADVERTISEMENT

ಕೇರಳ ಪಿಣರಾಯಿ ವಿಜಯನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಯಿಂದ ಸಿಎಂ ವಿರುದ್ಧ ಆರೋಪ

ಪಿಟಿಐ
Published 9 ಜೂನ್ 2022, 15:58 IST
Last Updated 9 ಜೂನ್ 2022, 15:58 IST
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್   

ತಿರುವನಂತಪುರ:ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಸ್ವಪ್ನಾಸುರೇಶ್ಅವರು ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಆರೋಪ ಮಾಡಿರುವುದರಿಂದ ಪಿಣರಾಯಿ ವಿಜಯನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ ಮುಂದುವರಿಸಿದ್ದರೆ, ವಿರೋಧ ಪಕ್ಷದ ಕಾರ್ಯಕರ್ತರು ಪೊಲೀಸರ ಜತೆ ಘರ್ಷಣೆ ನಡೆಸಿದ್ದಾರೆ.

‌‘ಪೊಲೀಸರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುವ ಮೂಲಕ ತನಿಖೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕೊಟ್ಟಾಯಂ, ಕೋಯಿಕ್ಕೋಡ್‌ ಜಿಲ್ಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೆಲ ಜಿಲ್ಲೆಗಳಲ್ಲಿ ಬ್ಯಾರಿಕೇಡ್ ಬಿಸಾಡಲು ಯತ್ನಿಸಿದ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದರು.

ಎರ್ನಾಕುಳಂನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪು ಚಿನ್ನದ ಬಿಸ್ಕೆಟ್ ಮತ್ತು ಬಿರಿಯಾನಿ ಪಾತ್ರೆಗಳ ಮಾದರಿ ಪ್ರದರ್ಶಿಸಿ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದರು.

ADVERTISEMENT

ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಮಾತನಾಡಿ, ‘ಸ್ವಪ್ನಾ ಸುರೇಶ್ ಅವರು ಮುಖ್ಯಮಂತ್ರಿ ವಿರುದ್ಧ ಗಂಭೀರ ಆರೋಪ ಹೊರಿಸಿ, ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದಾರೆ. ನ್ಯಾಯಯುತ ತನಿಖೆ ನಡೆಸಬೇಕೆಂದು ಘೋಷಿಸಿದ ನಂತರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಬದಲು, ಸಾಕ್ಷ್ಯ ನಾಶಪಡಿಸಲು ಮತ್ತು ಅಧಿಕಾರ ದುರುಪಯೋಗಪಡಿಸಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.