ADVERTISEMENT

ಚಿನ್ನ ಅಕ್ರಮ ಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್ ಜಾಮೀನು ಅರ್ಜಿ ವಜಾ

ಪಿಟಿಐ
Published 21 ಆಗಸ್ಟ್ 2020, 11:12 IST
Last Updated 21 ಆಗಸ್ಟ್ 2020, 11:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಚ್ಚಿ: ಚಿನ್ನ ಅಕ್ರಮ ಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

’ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿಆರೋಪಿಯು ಜಾರಿ ನಿರ್ದೇಶನಾಲಯದ ಎದುರು ಒಪ್ಪಿಕೊಂಡಿದ್ದಾಗಿ’ ಅರ್ಜಿ ವಜಾಗೊಳಿಸಿರುವ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಹೇಳಿದೆ.

ರಾಜತಾಂತ್ರಿಕ ಮಾರ್ಗವನ್ನು ದುರುಪಯೋಗ ಮಾಡಿಕೊಂಡ ಆರೋಪದ ಅಡಿ ಸ್ವಪ್ನಾ ಸುರೇಶ್ ಮತ್ತಿತರರನ್ನು ರಾಷ್ಟ್ರೀಯ ತನಿಖಾ ದಳದವರು ಬಂಧಿಸಿದ್ದರು. ಜಾರಿ ನಿರ್ದೇಶನಾಲಯ ಇವರ ವಿರುದ್ಧ ಪ್ರಕರಣ ದಾಖಲಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.