ADVERTISEMENT

ಕೇರಳ ಚಿನ್ನ ಕಳ್ಳ ಸಾಗಣೆ ಪ್ರಕರಣ| ಅಮಾನತುಗೊಂಡಿರುವ ಅಧಿಕಾರಿ ಶಿವಶಂಕರ್‌ ವಿಚಾರಣೆ

ಪಿಟಿಐ
Published 27 ಜುಲೈ 2020, 7:55 IST
Last Updated 27 ಜುಲೈ 2020, 7:55 IST
ಚಿನ್ನ ಕಳ್ಳ ಸಾಗಣೆ ಪ್ರಕರಣದ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಹಿರಿಯ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್ ಅವರು ವಿಚಾರಣೆಗೆ ಹಾಜರಾಗಲು ಕೊಚ್ಚಿಯಲ್ಲಿರುವ ಎನ್‌ಐಎ ಕಚೇರಿಗೆ ಬರುತ್ತಿರುವುದು. (ಪಿಟಿಐ ಚಿತ್ರ)
ಚಿನ್ನ ಕಳ್ಳ ಸಾಗಣೆ ಪ್ರಕರಣದ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಹಿರಿಯ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್ ಅವರು ವಿಚಾರಣೆಗೆ ಹಾಜರಾಗಲು ಕೊಚ್ಚಿಯಲ್ಲಿರುವ ಎನ್‌ಐಎ ಕಚೇರಿಗೆ ಬರುತ್ತಿರುವುದು. (ಪಿಟಿಐ ಚಿತ್ರ)   

ಕೊಚ್ಚಿ: ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ಚಿನ್ನ ಸಾಗಣೆ ಮಾಡಲು ನೆರವಾದ ಆರೋಪದಡಿ ಅಮಾನತುಗೊಂಡಿರುವ ಹಿರಿಯ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್ ಅವರನ್ನುರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಿದರು.

ಶಿವಶಂಕರ್ ಅವರನ್ನು ತಿರುವನಂತಪುರದ ಪೆರೂಕಾರ್ಡ್‌ ಪೊಲೀಸ್ ಕ್ಲಬ್‌ನಲ್ಲಿ ಸುಮಾರು 5 ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆ ನಡೆಸಿದರು. ಜುಲೈ 15ರಿಂದ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ, ಈ ಮುಂಚೆ ಒಮ್ಮೆ ಶಿವಶಂಕರ್ ಅವರನ್ನು ಪ್ರಶ್ನಿಸಿತ್ತು.

ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಆರೋಪಿಗಳೊಂದಿಗೆ ನಂಟು ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಶಿವಶಂಕರ್ ಅವರನ್ನು ಮುಖ್ಯಮಂತ್ರಿ‌ ಪಿಣರಾಯಿವಿಜಯನ್‌ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿದ್ದರು. ಇದಾದ ಬಳಿಕ ಅವರನ್ನು ಅಮಾನತುಗೊಳಿಸಲಾಗಿತ್ತು.

ADVERTISEMENT

ತಿರುವನಂತಪುರದ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಣೆಯನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಹಚ್ಚಿದ ಬಳಿಕ ಆರೋಪಿಗಳನ್ನು ಬಂಧಿಸಿ,30 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿದ್ದು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಸರಿತಾ, ಸ್ವಪ್ನಾ ಸುರೇಶ್, ಸಂದೀಪ್ ನಾಯರ್ ಮತ್ತು ಫೈಜಲ್ ಫರೀದ್ ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.