ADVERTISEMENT

ಚೆನ್ನೈ: ವಿಮಾನ ನಿಲ್ದಾಣದಲ್ಲಿ ₹ 39.95 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ವಶ 

ಪಿಟಿಐ
Published 26 ಸೆಪ್ಟೆಂಬರ್ 2021, 13:09 IST
Last Updated 26 ಸೆಪ್ಟೆಂಬರ್ 2021, 13:09 IST
ಚಿನ್ನ– ಪ್ರಾತಿನಿಧಿಕ ಚಿತ್ರ
ಚಿನ್ನ– ಪ್ರಾತಿನಿಧಿಕ ಚಿತ್ರ   

ಚೆನ್ನೈ: ಇಲ್ಲಿಯ ವಿಮಾನ ನಿಲ್ದಾಣಕ್ಕೆ ಭಾನುವಾರ ಬಂದಿಳಿದ ದುಬೈ ಪ್ರಯಾಣಿಕನಿಂದ ₹ 39.95 ಲಕ್ಷ ಮೌಲ್ಯದ 864 ಗ್ರಾಂ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಖಚಿತ ಮಾಹಿತಿಗಳ ಆಧಾರದಲ್ಲಿ ವಾಯು ಗುಪ್ತಚರ ವಿಭಾಗದ ಅಧಿಕಾರಿಗಳು ಚೆನ್ನೈನ ವಿಮಾನ ನಿಲ್ದಾಣಕ್ಕೆ ಬಂದಿಳಿದ 41 ವರ್ಷದ ದುಬೈ ವ್ಯಕ್ತಿಯನ್ನು ತಡೆದು ತಪಾಸಣೆ ನಡೆಸಿದರು. ಈ ವೇಳೆ ಗುದನಾಳದಲ್ಲಿ ಅಡಗಿಸಿ ಇಟ್ಟಿದ್ದ ಚಿನ್ನದ ಗಟ್ಟಿಗಳು ಪತ್ತೆಯಾದವು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT