ADVERTISEMENT

ಕ್ಯಾಸಿನೊ, ಕುದುರೆ ರೇಸ್, ಆನ್‌ಲೈನ್ ಆಟಕ್ಕೆ ಶೇ 28 ತೆರಿಗೆ

ಪಿಟಿಐ
Published 18 ಮೇ 2022, 11:36 IST
Last Updated 18 ಮೇ 2022, 11:36 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ (ಪಿಟಿಐ): ಕ್ಯಾಸಿನೊಗಳು, ಕುದುರೆ ರೇಸ್ ಮತ್ತು ಆನ್‌ಲೈನ್‌ ಆಟಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯ (ಜಿಎಸ್‌ಟಿ) ಅಡಿಯಲ್ಲಿ ಶೇಕಡ 28ರಷ್ಟು ತೆರಿಗೆ ವಿಧಿಸಲು ಸಚಿವರ ಸಮಿತಿಯು ಶಿಫಾರಸು ಮಾಡಿದೆ. ಸಮಿತಿಯ ವರದಿಯನ್ನು ಜಿಎಸ್‌ಟಿ ಮಂಡಳಿಯ ಮುಂಬರುವ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುತ್ತದೆ.

ಕ್ಯಾಸಿನೊ, ಕುದುರೆ ರೇಸ್ ಹಾಗೂ ಆನ್‌ಲೈನ್ ಆಟಗಳ ಮೇಲೆ ಎಷ್ಟು ತೆರಿಗೆ ವಿಧಿಸಬೇಕು ಎಂಬುದನ್ನು ಪರಿಶೀಲಿಸಲು ಮೇಘಾಲಯದ ಮುಖ್ಯಮಂತ್ರಿ ಕೊನ್ರಾಡ್ ಸಂಗ್ಮಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

ಸಮಿತಿಯ ವರದಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಇನ್ನು ಒಂದೆರಡು ದಿನಗಳಲ್ಲಿ ಸಲ್ಲಿಸಲಾಗುತ್ತದೆ ಎಂದು ಸಂಗ್ಮಾ ಅವರು ಟ್ವೀಟ್ ಮಾಡಿದ್ದಾರೆ. ಈಗಿನ ನಿಯಮಗಳ ಅನ್ವಯ ಕ್ಯಾಸಿನೊ, ಕುದುರೆ ರೇಸ್ ಹಾಗೂ ಆನ್‌ಲೈನ್ ಆಟಗಳಿಗೆ ಶೇ 18ರಷ್ಟು ತೆರಿಗೆ ವಿಧಿಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.