ಸಿಂಗರೌಲಿ: ಎರಡು ಗೂಡ್ಸ್ ರೈಲುಗಳು ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ಮಧ್ಯಪ್ರದೇಶದ ಸಿಂಗರೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಾನುವಾರ ನಡೆದಿದೆ.
ಮುಂಜಾನೆ ಸುಮಾರು 4.40ರ ವೇಳೆಗೆ ಮಧ್ಯಪ್ರದೇಶದ ಅಮ್ಲೋರಿ ಗಣಿಯಿಂದ ಕಲ್ಲಿದ್ದಲು ತುಂಬಿಕೊಂಡು ಉತ್ತರ ಪ್ರದೇಶಕ್ಕೆ ಹೊರಟಿದ್ದ ಗೂಡ್ಸ್ ರೈಲೊಂದು ಘನಹರಿ ಹಳ್ಳಿಯಲ್ಲಿ ಇನ್ನೊಂದು ಖಾಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ‘ಘಟನೆಯಲ್ಲಿ ಎಂಜಿನ್‌ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.