ತಿರುಪತಿ (ಆಂಧ್ರಪ್ರದೇಶ): ಗೂಗಲ್ ಉಪಾಧ್ಯಕ್ಷ ತೋಟ ಚಂದ್ರಶೇಖರ್ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಪ್ರಾಣದಾನ ಟ್ರಸ್ಟ್‌ಗೆ ₹ 1 ಕೋಟಿ ದೇಣಿಗೆ ನೀಡಿದ್ದಾರೆ.
ಈ ಬಗ್ಗೆ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಖಚಿತಪಡಿಸಿದ್ದಾರೆ. ಚಂದ್ರಶೇಖರ್ ಅವರಿಂದ ಚೆಕ್ ಪಡೆದಿರುವುದಾಗಿ ಅವರು ಹೇಳಿದ್ದಾರೆ.
ಟಿಟಿಡಿಯ ಅಧಿಕಾರಿಗಳು ದಾನಿ ಚಂದ್ರಶೇಖರ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ತಿರುಪತಿಯ ತಿಮ್ಮಪ್ಪ ದೇವಾಲಯ ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.