ADVERTISEMENT

ರೆಮ್‌ಡಿಸಿವಿರ್‌ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ: ಸ್ಟಾಲಿನ್‌ ಎಚ್ಚರಿಕೆ

ಪಿಟಿಐ
Published 15 ಮೇ 2021, 10:23 IST
Last Updated 15 ಮೇ 2021, 10:23 IST
ಎಂ.ಕೆ.ಸ್ಟಾಲಿನ್‌
ಎಂ.ಕೆ.ಸ್ಟಾಲಿನ್‌   

ಚೆನ್ನೈ: ‘ಕೋವಿಡ್‌ ಚಿಕಿತ್ಸೆಗೆ ಬಳಸಲಾಗುತ್ತಿರುವ ರೆಮ್‌ಡಿಸಿವಿರ್‌ ಔಷಧಿಯನ್ನು ಸಂಗ್ರಹಿಸುವುದು ಮತ್ತು ಆಮ್ಲಜನಕ ಸಿಲಿಂಡರ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಲಾಗುವುದು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಶನಿವಾರ ಹೇಳಿದರು.

‘ಕೋವಿಡ್‌ ಪ್ರಸರಣವನ್ನು ತಡೆಯಲು ಹೇರಲಾಗಿರುವ ಲಾಕ್‌ಡೌನ್‌ ಎಂಬ ‘ಕಹಿ ಗುಳಿಗೆ’ಯನ್ನುಸಾರ್ವಜನಿಕರು ಸ್ವೀಕರಿಸಿದ್ದಾರೆ. ಇಂತಹ ಸಂದರ್ಭದಲ್ಲೂ ಕೆಲವು ಸಮಾಜ ಘಾತುಕ ವ್ಯಕ್ತಿಗಳು ರೆಮ್‌ಡಿಸಿವಿರ್‌ ಔಷಧಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಅಲ್ಲದೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ’ ಎಂದು ಅವರು ತಿಳಿಸಿದರು.

‘ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಇಂತಹ ಕೃತ್ಯಗಳನ್ನು ದೊಡ್ಡ ಅಪರಾಧವೆಂದು ಪರಿಗಣಿಸಲಾಗುವುದು. ನಾನು ಈಗಾಗಲೇ ಈ ರೀತಿಯ ಕೃತ್ಯ ಎಸಗುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದ್ದೇನೆ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.