ADVERTISEMENT

ಕರ್ನಾಟಕಕ್ಕೆ ಬರಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಒಪ್ಪಿದೆ: ಕೇಂದ್ರ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಏಪ್ರಿಲ್ 2024, 9:55 IST
Last Updated 22 ಏಪ್ರಿಲ್ 2024, 9:55 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಕರ್ನಾಟಕ್ಕಕೆ ಬರ ಪರಿಹಾರ ಬಿಡುಗಡೆ ಮಾಡಲು ಚುನಾವಣಾ ಆಯೋಗ ಒಪ್ಪಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಬಗ್ಗೆ ಲೈವ್‌ ಲಾ ವರದಿ ಮಾಡಿದೆ.

ADVERTISEMENT

ಬರಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರದಕ್ಕೆ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ನ್ಯಾಯಮೂರ್ತಿ ಬಿ.ಆರ್‌ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ಹೇಳಿದರು.

ಈ ಸಂಬಂಧ ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದರಿಂದ ಹೆಚ್ಚಿನ ವಾದ ಅಗತ್ಯವಿಲ್ಲ. ಅಗತ್ಯವಾದ ಕ್ರಮವನ್ನು ಶೀಘ್ರವೇ ತೆಗೆದುಕೊಳ್ಳಲಾಗುವುದು ಎಂದು ಪೀಠಕ್ಕೆ ತಿಳಿಸಿದ ಅವರು, ಸೋಮವಾರಕ್ಕೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿಕೊಂಡರು. ಅಲ್ಲದೆ ಆ ವೇಳೆಗೆ ‘ಏನಾದರೊಂದು ಆಗಬಹುದು’ ಎಂದು ಎ.ಜಿ ಹೇಳಿದರು.

ಎ.ಜಿ ತೋರಿಸಿದ ವಿಶ್ವಾಸದ ಹಿನ್ನೆಲೆಯಲ್ಲಿ ಮುಂದೂಡಲು ಯಾವುದೇ ಸಮಸ್ಯೆ ಇಲ್ಲ ಎಂದು ಕರ್ನಾಟಕದ ‍ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.