
ಪಿಟಿಐ
ಖಗೇರಿಯಾ: ಬಿಹಾರದಲ್ಲಿ ‘ಇಂಡಿಯಾ’ ಬಣ ಅಧಿಕಾರಕ್ಕೆ ಬಂದ 20 ದಿನಗಳಲ್ಲೇ ಮನೆಗೊಂದು ಸರ್ಕಾರಿ ನೌಕರಿ ನೀಡಲು ಅಗತ್ಯ ಕಾನೂನು ರಚಿಸಲಾಗುವುದು’ ಎಂದು ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆಯಾಗಿರುವ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಶನಿವಾರ ಹೇಳಿದ್ದಾರೆ.
ಖಗೇರಿಯಾ ಜಿಲ್ಲೆಯ ಗೋಗ್ರಿಯಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಕಾನೂನು ರಚನೆಯಾದ 20 ತಿಂಗಳ ಒಳಗಾಗಿ ನೇಮಕಾತಿಯನ್ನೂ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.
‘ಈ ಚುನಾವಣೆಯಲ್ಲಿ ಕೇವಲ ಸರ್ಕಾರ ರಚನೆಗಾಗಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ಬಿಹಾರದ ಪುನರ್ ನಿರ್ಮಾಣಕ್ಕೆ ಕೆಲಸ ಹೋರಾಡುತ್ತಿದ್ದೇನೆ’ ಎಂದಿದ್ದಾರೆ.
‘ಬಿಹಾರವನ್ನು ನಾವು ನಂ. 1 ರಾಜ್ಯವನ್ನಾಗಿ ಮಾಡಬೇಕು. ಅದಕ್ಕಾಗಿ ಹೂಡಿಕೆಯನ್ನು ತರಬೇಕು. ಶಿಕ್ಷಣವನ್ನು ಪ್ರೋತ್ಸಾಹಿಸಬೇಕು ಮತ್ತು ಸುಸಜ್ಜಿತ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡುವ ಉದ್ದೇಶ ನಮ್ಮದು’ ಎಂದು ತೇಜಸ್ವಿ ಹೇಳಿದ್ದಾರೆ.