
ಸೈಬರ್ ವಂಚನೆ
ನವದೆಹಲಿ: ಕೇಂದ್ರ ಸರ್ಕಾರವು ಸ್ಮಾರ್ಟ್‌ಫೋನ್‌ಗಳಿಗೆ ಸಂಬಂಧಿಸಿದಂತೆ ಹೊಸ ಭದ್ರತಾ ನಿಯಮಗಳನ್ನು ರೂಪಿಸಲು ಯೋಜಿಸುತ್ತಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸ್ಮಾರ್ಟ್‌ಫೋನ್ ತಯಾರಕ ಕಂಪನಿಗಳ ಪ್ರತಿನಿಧಿಗಳ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದೆ.
ಪ್ರಿ–ಇನ್‌ಸ್ಟಾಲ್ಡ್ ಆ್ಯಪ್‌ಗಳು ಮತ್ತು ಸಾಫ್ಟ್‌ವೇರ್ ಅಪ್‌ಡೇಟ್‌ಗಳನ್ನು ನೀಡುವ ವ್ಯವಸ್ಥೆಯನ್ನು ಫೋನ್‌ಗಳು ಹೇಗೆ ನಿರ್ವಹಿಸುತ್ತವೆ ಎಂಬುದಕ್ಕೂ ಹೊಸ ನಿಯಮಗಳು ಅನ್ವಯವಾಗಲಿವೆ.
ಹೊಸ ನಿಯಮಗಳಿಗೆ ಅಂತಿಮ ರೂಪ ನೀಡುವ ನಿಟ್ಟಿನಲ್ಲಿ ಸಚಿವಾಲಯದ ಅಧಿಕಾರಿಗಳು ಸ್ಮಾರ್ಟ್‌ಫೋನ್ ಕಂಪನಿಗಳ ಪ್ರತಿನಿಧಿಗಳ ಜತೆ ಈ ವಾರ ಇನ್ನೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.
ಆನ್‌ಲೈನ್ ವಂಚನೆಗಳಿಂದ ಬಳಕೆದಾರರಿಗೆ ರಕ್ಷಣೆ ಒದಗಿಸಲು ಮತ್ತು ಸ್ಮಾರ್ಟ್‌ಫೋನ್‌ಗಳಲ್ಲಿ ಸಂಗ್ರಹಿಸಿಡುವ ಡೇಟಾಗಳನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರವು ಈ ಹೆಜ್ಜೆಯಿಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.