ADVERTISEMENT

ರಾಜಸ್ಥಾನ| ಅಧಿವೇಶನ ನಡೆಸಲು ಕೊನೆಗೂ ಅನುಮತಿ ನೀಡಿದ ರಾಜ್ಯಪಾಲ

ಪಿಟಿಐ
Published 30 ಜುಲೈ 2020, 4:42 IST
Last Updated 30 ಜುಲೈ 2020, 4:42 IST
ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಮತ್ತು ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌
ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಮತ್ತು ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌   

ಜೈಪುರ: ಆಗಸ್ಟ್‌ 14ರಿಂದ ವಿಧಾನಸಭೆಯ ಅಧಿವೇಶನ ನಡೆಸಲು ರಾಜಸ್ಥಾನ ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಅವರು ಬುಧವಾರ ಅನುಮತಿ ನೀಡಿದ್ದಾರೆ.

ಆ ಮೂಲಕ ರಾಜ್ಯದಲ್ಲಿ ಉದ್ಭವಿಸಿದ್ದ ರಾಜಕೀಯ ಬಿಕ್ಕಟ್ಟು ತಾತ್ಕಾಲಿಕವಾಗಿ ಶಮನಗೊಂಡಂತಾಗಿದೆ. ಅಧಿ ವೇಶನ ನಡೆಸಲು ಅನುಮತಿ ಕೋರಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಕಳುಹಿಸಿದ್ದ ಮೂರನೇ ಪ್ರಸ್ತಾವನೆಯನ್ನೂ ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ತಿರಸ್ಕರಿಸಿದ್ದರು. ನಂತರ, ಅಶೋಕ್‌ ಗೆಹ್ಲೋಟ್‌ ಬುಧ ವಾರ ಮಿಶ್ರಾ ಅವರನ್ನು ಭೇಟಿ ಮಾಡಿ ಮಾತುಕತೆನಡೆಸಿದ್ದರು.

ಹೈಕೋರ್ಟ್‌ಗೆ ಮೊರೆ: ಪಕ್ಷದ ಶಾಸಕರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿ ಕೊಂಡಿರುವುದನ್ನು ಪ್ರಶ್ನಿಸಿ ಬಿಎಸ್‌ಪಿ ಹೈಕೋರ್ಟ್‌ನಲ್ಲಿ ಬುಧವಾರ ಅರ್ಜಿ ಸಲ್ಲಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.