ಚೆನ್ನೈ: ‘ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹೊರತಾಗಿಯೂ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳುತ್ತಿಲ್ಲ’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ಆರೋಪಿಸಿದರು.
ತಂಜಾವೂರಿನಲ್ಲಿ ಆಯೋಜಿಸಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ತಂಜಾವೂರಿನಲ್ಲಿ ಹೊಸದಾಗಿ ಎಂ.ಕರುಣಾನಿಧಿ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮಸೂದೆಯನ್ನು ಅಧಿವೇಶನದಲ್ಲಿ ಅಂಗೀಕರಿಸಿದ್ದು, ರಾಜ್ಯಪಾಲರ ಅನುಮೋದನೆಗೆ ಕಳುಹಿಸಿ 40 ದಿನಗಳಾಗಿವೆ. ಆದರೆ, ಈವರೆಗೂ ಸಹಿ ಹಾಕಿಲ್ಲ. ನಾವು ಕಳುಹಿಸಿದ ಕೂಡಲೇ ಅನುಮೋದನೆ ನೀಡಿದ್ದರೆ ಈ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸುತ್ತಿದ್ದೆ’ ಎಂದು ಹೇಳಿದರು.
‘ರಾಜ್ಯಪಾಲರ ಕಚೇರಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷವಾದ ಎಐಎಡಿಎಂಕೆ ಕಡೆಯಿಂದ ಡಿಎಂಕೆ ಅಡೆತಡೆಗಳನ್ನು ಎದುರಿಸುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.