
ಬಾಲಿವುಡ್ ನಟ ಗೋವಿಂದ ಮತ್ತು ಬಿಜೆಪಿ ಸಂಸದ ಮನೋಜ್ ತಿವಾರಿ
–ಪಿಟಿಐ ಚಿತ್ರಗಳು
ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಮ್ಯಾಕ್ಸಿಜೋನ್ ಟಚ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಹೂಡಿಕೆ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟರಾದ ಗೋವಿಂದ, ಶಕ್ತಿ ಕಪೂರ್, ಚಂಕಿ ಪಾಂಡೆ, ಬಿಜೆಪಿ ಸಂಸದ ಮನೋಜ್ ತಿವಾರಿ ಸೇರಿದಂತೆ ಇತರರ ಹೆಸರುಗಳು ಕೇಳಿಬಂದಿವೆ.
ನಕಲಿ ಯೋಜನೆ ಹೆಸರಲ್ಲಿ ಹೂಡಿಕೆದಾರರನ್ನು ವಂಚಿಸಿದ ಆರೋಪದ ಮೇಲೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದು ₹600 ಕೋಟಿ ಮೊತ್ತದ ದೊಡ್ಡ ಹೂಡಿಕೆ ಮತ್ತು ಕ್ರಿಪ್ಟೋಕರೆನ್ಸಿ ವಂಚನೆಗೆ ಸಂಬಂಧಿಸಿದ ಪ್ರಕರಣವಾಗಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.
ವಂಚನೆಗೊಳಗಾದ ಹೂಡಿಕೆದಾರರಲ್ಲಿ ಒಬ್ಬರಾದ ಜಸ್ಪಾಲ್ ಸಿಂಗ್ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಹೂಡಿಕೆದಾರರಿಗೆ ಶೇಕಡ 15ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಯಾವುದೇ ಬಡ್ಡಿ ಅಥವಾ ಮೂಲ ಮೊತ್ತವೇ ವಾಪಸ್ ಸಿಕ್ಕಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಟರು (ಗೋವಿಂದ ಮತ್ತು ಶಕ್ತಿ ಕಪೂರ್) ಮಾಡಿದ ಪ್ರಚಾರದಿಂದಾಗಿ ಹೆಚ್ಚಿನ ಜನರು ಹೂಡಿಕೆ ಮಾಡಿದ್ದರು. 2025ರ ಸೆಪ್ಟೆಂಬರ್‌ನಲ್ಲಿ ಮ್ಯಾಕ್ಸಿಜೋನ್ ಟಚ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಚಂದರ್ ಭೂಷಣ್ ಸಿಂಗ್ ಮತ್ತು ಅವರ ಪತ್ನಿ ಪ್ರಿಯಾಂಕಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.