ADVERTISEMENT

ಹೊಸ ಕೊರೊನಾ ವೈರಸ್ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ: ಕೇಂದ್ರ ಆರೋಗ್ಯ ಸಚಿವ

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ಪಿಟಿಐ
Published 21 ಡಿಸೆಂಬರ್ 2020, 9:39 IST
Last Updated 21 ಡಿಸೆಂಬರ್ 2020, 9:39 IST
   

ನವದೆಹಲಿ: ‘ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ಸ್ವರೂಪದ ಕೊರೊನಾವೈರಸ್‌ ಬಗ್ಗೆ ಸರ್ಕಾರ ಜಾಗರೂಕವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ‘ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

‘ದೇಶದಲ್ಲಿ ಕಳೆದ ಒಂದು ವರ್ಷದಿಂದ ಎದುರಾಗಿದ್ದ ‘ಕೋವಿಡ್‌ 19‘ ಪರಿಸ್ಥಿತಿಯನ್ನು ಸರ್ಕಾರ ಸಮರ್ಪಕವಾಗಿ ಎದುರಿಸಿದೆ. ಈ ಹೊಸ ಸ್ವರೂಪದ ವೈರಸ್‌ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ‘ ಎಂದು ಹೇಳಿದ್ದಾರೆ.

ಬ್ರಿಟನ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಹಾಗೂ ಬ್ರಿಟನ್‌ನಿಂದ ಬರುವ ವಿಮಾನಗಳನ್ನು ನಿಷೇಧಿಸಬೇಕೆಂಬ ಬೇಡಿಕೆಯ ಕುರಿತಾದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಇವೆಲ್ಲ ಕಾಲ್ಪನಿಕ ಸನ್ನಿವೇಶಗಳು, ಕಾಲ್ಪನಿಕ ಮಾತುಕತೆಗಳು, ಕಾಲ್ಪನಿಕ ಭೀತಿ. ನೀವು ಇವುಗಳ ಬಗ್ಗೆ ಚಿಂತಿಸಲು ಹೋಗಬೇಡಿ‘ ಎಂದು ಹೇಳಿದರು.

ADVERTISEMENT

‘ಸರ್ಕಾರ ಎಲ್ಲದರ ಬಗ್ಗೆಯೂ ಸಂಪೂರ್ಣ ಜಾಗರೂಕವಾಗಿದೆ. ಜನರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ‘ ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.