ADVERTISEMENT

ಮಂಜೂರಾದ ಶಿಕ್ಷಕ ಹುದ್ದೆಗಳ ಭರ್ತಿಗೆ ಕೇಂದ್ರೀಯ ವಿ.ವಿಗಳಿಗೆ ಕೇಂದ್ರ ಸೂಚನೆ

ಪಿಟಿಐ
Published 9 ಫೆಬ್ರುವರಿ 2022, 14:29 IST
Last Updated 9 ಫೆಬ್ರುವರಿ 2022, 14:29 IST
ಸುಭಾಸ್‌ ಸರ್ಕಾರ್‌
ಸುಭಾಸ್‌ ಸರ್ಕಾರ್‌   

ನವದೆಹಲಿ: ಮಂಜೂರಾದ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರ ಸರ್ಕಾರ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸುಭಾಸ್‌ ಸರ್ಕಾರ್‌ ಬುಧವಾರ ರಾಜ್ಯಸಭೆಗೆ ಮಾಹಿತಿ ನೀಡಿದರು.

ಪೂರಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಶಿಕ್ಷಕರ ನೇಮಕಾತಿಯು ನಿರಂತರ ಪ್ರಕ್ರಿಯೆಯಾಗಿದೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಐಐಟಿಗಳು ಸೇರಿದಂತೆ ವಿಶ್ವವಿದ್ಯಾಲಯಗಳಿಗೆ ಸರ್ಕಾರ ನಿರ್ದೇಶನ ನೀಡಿದೆ. ಹುದ್ದೆಗಳ ಭರ್ತಿ ಬಗ್ಗೆ ಶಿಕ್ಷಣ ಸಂಸ್ಥೆಗಳು ತಮ್ಮ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸುವಂತೆಯೂ ಹೇಳಿದೆ’ ಎಂದು ಹೇಳಿದರು.

ಐಐಟಿ ಸೇರಿದಂತೆ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಮಂಜೂರಾದ 6,535 ಹುದ್ದೆಗಳ ಭರ್ತಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸಿಪಿಎಂ ಸಂಸದ ಬಿಕಾಶ್‌ ರಂಜನ್‌ ಭಟ್ಟಾಚಾರ್ಯ ಅವರು ಕೇಳಿದ ಪ್ರಶ್ನೆಗೆ ಸುಭಾಸ್‌ ಸರ್ಕಾರ್‌ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.