ADVERTISEMENT

‘ಪ್ಲಾಸ್ಟಿಕ್‌ ರಾಷ್ಟ್ರಧ್ವಜ ಬಳಕೆ ಬೇಡ’

ಪಿಟಿಐ
Published 8 ಆಗಸ್ಟ್ 2018, 11:14 IST
Last Updated 8 ಆಗಸ್ಟ್ 2018, 11:14 IST
ಪ್ಲಾಸ್ಟಿಕ್‌ ಧ್ವಜ
ಪ್ಲಾಸ್ಟಿಕ್‌ ಧ್ವಜ   

ನವದೆಹಲಿ: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ಲಾಸ್ಟಿಕ್‌ ರಾಷ್ಟ್ರಧ್ವಜಗಳನ್ನು ಬಳಸಬೇಡಿ ಎಂದು ಕೇಂದ್ರ ಸರ್ಕಾರ ನಾಗರಿಕರಲ್ಲಿ ಮನವಿ ಮಾಡಿದೆ.

ರಾಷ್ಟ್ರಧ್ವಜ ಬಳಕೆಯ ಕುರಿತು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು ಎಂದು ಕೇಂದ್ರಾಡಳಿತ ಪ್ರದೇಶಗಳಿಗೆ ಮತ್ತು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.

ಪ್ಲಾಸ್ಟಿಕ್‌ನಿಂದ ತಯಾರಿಸಿದ ಧ್ವಜಗಳನ್ನು ಪ್ರಮುಖ ಸಮಾರಂಭಗಳಲ್ಲಿ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಇವುಗಳು ದೀರ್ಘಕಾಲದವರೆಗೂ ಮಣ್ಣಿನಲ್ಲಿ ಕರಗದೆ ಪರಿಸರಕ್ಕೆ ಹಾನಿ ಉಂಟುಮಾಡುತ್ತಿವೆ ಎಂದೂ ತಿಳಿಸಿದೆ.

ADVERTISEMENT

ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದರೆ, ವಿರೂಪಗೊಳಿಸಿದರೆ ಅಥವಾ ಯಾವುದೇ ರೀತಿಯಲ್ಲಿ ಅಗೌರವ ತೋರಿದರೆ ಮೂರು ವರ್ಷಗಳ ವರೆಗೆ ಜೈಲುಶಿಕ್ಷೆ ಅನುಭವಿಸಬೇಕಾಗಬಹುದು.ಕ್ರೀಡೆ ಹಾಗೂ ಪ್ರಮುಖ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಸಾರ್ವಜನಿಕರು ಕಾಗದದಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸಬಹುದು ಎಂದೂ ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.