ADVERTISEMENT

ಕೋವಿಡ್‌: ಔಷಧ ಲಭ್ಯತೆ ಖಚಿತಪಡಿಸಿಕೊಳ್ಳಲು ಫಾರ್ಮಾ ಕಂಪನಿಗೆ ಸೂಚನೆ

ಪಿಟಿಐ
Published 29 ಡಿಸೆಂಬರ್ 2022, 14:52 IST
Last Updated 29 ಡಿಸೆಂಬರ್ 2022, 14:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೆಲ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಸೇರಿದಂತೆ ಎಲ್ಲಾ ಔಷಧಿಗಳ ಸಾಕಷ್ಟು ದಾಸ್ತಾನು ಮತ್ತು ಲಭ್ಯತೆ ಖಚಿತಪಡಿಸಿಕೊಳ್ಳಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಗುರುವಾರ ಫಾರ್ಮಾ ಕಂಪನಿಗಳಿಗೆ ಸೂಚಿಸಿದ್ದಾರೆ.

ಕೋವಿಡ್-19 ನಿರ್ವಹಣಾ ಔಷಧಗಳ ಸ್ಥಿತಿ, ಸಮರ್ಪಕತೆ ಮತ್ತು ಉತ್ಪಾದನಾ ಸಾಮರ್ಥ್ಯಗಳನ್ನು ಅವರು ವರ್ಚುವಲ್ ಕಾನ್ಫರೆನ್ಸ್ ಮೂಲಕ ಔಷಧಕಂಪನಿಗಳ ಪ್ರತಿನಿಧಿಗಳೊಂದಿಗೆ ಪರಿಶೀಲಿಸಿದರು.

ಭಾರತ ಯಾವುದೇ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸನ್ನದ್ಧವಾಗಿದೆ.ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಗಮನದಲ್ಲಿಟ್ಟುಕೊಂಡು ಸಭೆ ನಡೆಸಲಾಯಿತು. ಜಾಗತಿಕ ವಿದ್ಯಮಾನಗಳ ಬಗ್ಗೆ ಅಧಿಕಾರಿಗಳು ಸಚಿವರಿಗೆ ವಿವರಿಸಿದರು.

ADVERTISEMENT

ದೇಶದ ಔಷಧೀಯ ಉದ್ಯಮ ಸದೃಢ ಮತ್ತು ಸ್ಪಂದನಶೀಲವಾಗಿದೆ. ಅವರ ಶಕ್ತಿಯಿಂದಾಗಿ ಸಾಂಕ್ರಾಮಿಕ ಸಂದರ್ಭದಲ್ಲಿ 150 ದೇಶಗಳಿಗೆ ಔಷಧಗಳನ್ನು ಪೂರೈಸಲು ಸಾಧ್ಯವಾಯಿತು ಎಂದು ಅವರು ಹೇಳಿದರು.

ಕೋವಿಡ್ ಔಷಧ ಸೇರಿದಂತೆ ಎಲ್ಲಾ ಔಷಧಗಳ ಸಾಕಷ್ಟು ದಾಸ್ತಾನು ಮತ್ತು ಲಭ್ಯತೆ ಖಚಿತಪಡಿಸಿಕೊಳ್ಳುವಂತೆ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.