
ಪಿಟಿಐ
ಸಂಸತ್ ಭವನ
ನವದೆಹಲಿ: ಇರಾನ್ ಪರ ಪ್ರತಿಭಟನೆಗಳು ಮತ್ತು ಇರಾನ್ ಪರವಾದ ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಭೂತವಾದಿಗಳ ಮೇಲೆ ನಿಗಾ ಇಡಿ. ಅವರ ಹೇಳಿಕೆಯು ದೇಶದಲ್ಲಿ ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳಿಗೆ ತಿಳಿಸಿದೆ.
ಸಚಿವಾಲಯವು ಫೆ.28ರಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸಂಬಂಧ ಪತ್ರ ಬರೆದಿದ್ದು, ಮೂಲಭೂತವಾದಿಗಳು ಮತ್ತು ಜಾಗತಿಕ ಭಯೋತ್ಪಾದಕ ಗುಂಪುಗಳ ಸಾಮಾಜಿಕ ಜಾಲತಾಣ ಚಟುವಟಿಕೆ ಮೇಲೆಯೂ ಕಣ್ಗಾವಲಿಡಲು ತಿಳಿಸಿದೆ.
ಇಸ್ರೇಲ್ ಮತ್ತು ಅಮೆರಿಕದ ಕಾನ್ಸುಲೇಟ್ ಮತ್ತು ರಾಯಭಾರ ಕಚೇರಿ ಹಾಗೂ ರಾಜತಾಂತ್ರಿಕ ಕಚೇರಿಗಳಿಗೆ ಹೆಚ್ಚಿನ ಭದ್ರತೆ ನೀಡುವಂತೆಯೂ ಸೂಚಿಸಿದೆ.
ದೇಶದ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಭಾರತದ ಹಲವೆಡೆ ಶೋಕಾಚರಣೆ ಮಾಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.