ADVERTISEMENT

ಲಡಾಖ್‌ ಬಳಿ ಚೀನಾ ಮೂಲಸೌಕರ್ಯ ಅಭಿವೃದ್ಧಿ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ಪಿಟಿಐ
Published 10 ಜೂನ್ 2022, 8:33 IST
Last Updated 10 ಜೂನ್ 2022, 8:33 IST
ರಾಹುಲ್ ಗಾಂಧಿ – ಪಿಟಿಐ ಚಿತ್ರ
ರಾಹುಲ್ ಗಾಂಧಿ – ಪಿಟಿಐ ಚಿತ್ರ   

ನವದೆಹಲಿ:ಗಡಿ ಪ್ರದೇಶಗಳಲ್ಲಿ ಚೀನಾ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿರುವುದನ್ನು ನಿರ್ಲಕ್ಷಿಸುವ ಮೂಲಕ ಕೇಂದ್ರ ಸರ್ಕಾರವು ದೇಶದ ಜನತೆಗೆ ದ್ರೋಹ ಬಗೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಲಡಾಖ್‌ ಬಳಿ ಚೀನಾ ಮೂಲಸೌಕರ್ಯ ಅಭಿವೃದ್ಧಿ ಮಾಡುತ್ತಿರುವುದು ಎಚ್ಚರಿಕೆಯ ಗಂಟೆ ಎಂಬ ಅಮೆರಿಕದ ಜನರಲ್ ಚಾರ್ಲ್ಸ್ ಎ ಫ್ಲಿನ್ ಹೇಳಿಕೆಗೆ ಸಬಂಧಿಸಿದ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಅವರು ಟ್ವೀಟ್ ಮಾಡಿದ್ದಾರೆ.

‘ಭವಿಷ್ಯದ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಲು ಚೀನಾ ಅಡಿಪಾಯವನ್ನು ಹಾಕಿಕೊಳ್ಳುತ್ತಿದೆ. ಇದನ್ನು ನಿರ್ಲಕ್ಷಿಸುವ ಮೂಲಕ ಸರ್ಕಾರವು ದೇಶಕ್ಕೆ ದ್ರೋಹ ಬಗೆಯುತ್ತಿದೆ’ ಎಂದು ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಲಡಾಖ್‌ಗೆ ಹೊಂದಿಕೊಂಡಿರುವ ತನ್ನ ಗಡಿಯಲ್ಲಿ ಚೀನಾ ರಕ್ಷಣಾ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿದೆ ಎಂದು ಅಮೆರಿಕ ಸೇನೆಯ ಪೆಸಿಫಿಕ್ ಕಮಾಂಡ್‌ನ ಜನರಲ್ ಚಾರ್ಲ್ಸ್ ಎ ಫ್ಲಿನ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ, ‘ಪೂರ್ವ ಲಡಾಖ್‌ಗೆ ಹೊಂದಿಕೊಂಡಿರುವ ಗಡಿ ಪ್ರದೇಶದಲ್ಲಿ ಚೀನಾ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿರುವುದು ಸೇರಿದಂತೆ ಗಡಿಯುದ್ದಕ್ಕೂ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಭಾರತವು ಸೂಕ್ಷ್ಮವಾಗಿ ಗಮನಿಸುತ್ತಿದೆ’ ಎಂದು ಗುರುವಾರ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.