ನವದೆಹಲಿ: ಸಾರ್ವಜನಿಕ ಉದ್ಯಮಿಗಳ ಇಲಾಖೆಯನ್ನು (ಡಿಪಿಇ) ಸರ್ಕಾರ, ಹಣಕಾಸು ಸಚಿವಾಲಯ ವ್ಯಾಪ್ತಿಗೆ ಸೇರಿಸಿದೆ.
ಬಂಡವಾಳ ಹಿಂತೆಗೆತ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ.
ಈ ಮೊದಲು ಡಿಪಿಇ, ಭಾರಿ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ಯಮಗಳು ಇಲಾಖೆಯ ಭಾಗವಾಗಿತ್ತು. ಹಣಕಾಸು ಸಚಿವಾಲಯದ ವ್ಯಾಪ್ತಿಗೆ ಸೇರುತ್ತಿರುವ ಆರನೇ ಇಲಾಖೆ ಇದಾಗಿದೆ.
ಜುಲೈ 6ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ.
ಎರಡು ರಾಷ್ಟ್ರೀಯ ಬ್ಯಾಂಕ್‌ಗಳ ಖಾಸಗೀಕರಣ ಮತ್ತು ಒಂದು ಜನರಲ್ ಇನ್ಸೂರೆನ್ಸ್ ಕಂಪನಿಯ ಖಾಸಗೀಕರಣದ ವಿಷಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021–22ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.