ADVERTISEMENT

ಜಮ್ಮು: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಖಂಡಿಸಿ ಹನುಮಾನ್ ಚಾಲೀಸಾ ಪಠಣ

ಪಿಟಿಐ
Published 21 ಮೇ 2022, 2:18 IST
Last Updated 21 ಮೇ 2022, 2:18 IST
   

ಜಮ್ಮು: ಸ್ಥಳೀಯ ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಆಜಾನ್ ಕೂಗುವುದರ ವಿರುದ್ಧ ಪ್ರತಿಭಟನಾರ್ತವಾಗಿ ಇಲ್ಲಿನ ಗಾಂಧಿ ಮೆಮೋರಿಯಲ್ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ.

ಬಳಿಕ, ವಿದ್ಯಾರ್ಥಿಗಳನ್ನು ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.

ತರಗತಿಯಲ್ಲಿ ಕಲಿಕೆಗೆ ಮಸೀದಿಯ ಧ್ವನಿವರ್ಧಕದ ಸದ್ದು ಅಡಚಣೆ ಮಾಡುತ್ತಿದೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮತ್ತು ಅದನ್ನು ತಡೆಯುವಲ್ಲಿ ಸ್ಥಳೀಯಾಡಳಿತ ವಿಫಲವಾಗಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಣ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದುಹಾಕುವ ನಿರ್ಣಯವನ್ನು ಜಮ್ಮು ಮಹಾನಗರ ಪಾಲಿಕೆಯು ಮಂಗಳವಾರ ಅಂಗೀಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.