ADVERTISEMENT

ಮತದಾರರ ಪಟ್ಟಿಯೊಂದಿಗೆ ಆಧಾರ್‌ ಜೋಡಣೆಗೆ ಚಿಂತನೆ

ಲೋಕಸಭೆಯಲ್ಲಿ ಕಾನೂನು ಸಚಿವ ರಿಜಿಜು ಹೇಳಿಕೆ

ಪಿಟಿಐ
Published 25 ಮಾರ್ಚ್ 2022, 12:15 IST
Last Updated 25 ಮಾರ್ಚ್ 2022, 12:15 IST
ಕಿರಣ್ ರಿಜಿಜು 
ಕಿರಣ್ ರಿಜಿಜು    

ನವದೆಹಲಿ: ಮತದಾನ ವೇಳೆ ಅಕ್ರಮಗಳನ್ನು ತಪ್ಪಿಸುವ ಸಲುವಾಗಿ ಮತದಾರರ ಪಟ್ಟಿಯೊಂದಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಶುಕ್ರವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಈ ವಿಷಯ ತಿಳಿಸಿದ ಅವರು, ವಿದೇಶಗಳಲ್ಲಿರುವ ಭಾರತೀಯರಿಗೆ ಆನ್‌ಲೈನ್‌ ಮೂಲಕ ಮತ ಚಲಾಯಿಸಲು ಅವಕಾಶ ನೀಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದರು.

‘ಚುನಾವಣಾ ಅಕ್ರಮ ಗಂಭೀರವಾದ ವಿಷಯ. ಇದನ್ನು ತಡೆಗಟ್ಟುವ ಮಾರ್ಗಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಮತದಾರರ ಪಟ್ಟಿಯೊಂದಿಗೆ ಆಧಾರ್‌ ಜೋಡಣೆ ಇಂಥ ಮಾರ್ಗಗಳಲ್ಲಿ ಒಂದಾಗಿದೆ. ವ್ಯಕ್ತಿಯೊಬ್ಬ ಸ್ವ ಇಚ್ಛೆಯಿಂದ ಆಧಾರ್‌ ಜೋಡಣೆ ಮಾಡಲು ಸದ್ಯ ಅವಕಾಶ ಇದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.