ADVERTISEMENT

75ನೇ ಸ್ವಾತಂತ್ಯೋತ್ಸವ ಆಚರಣೆ: ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಸಮಿತಿ ರಚನೆ

ಪಿಟಿಐ
Published 5 ಮಾರ್ಚ್ 2021, 22:11 IST
Last Updated 5 ಮಾರ್ಚ್ 2021, 22:11 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ 259 ಸದಸ್ಯರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ರಚಿಸಿದೆ.

75ನೇ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಈ ಸಮಿತಿ ಮಾರ್ಗಸೂಚಿಗಳನ್ನು ನೀಡುವುದು. ರಾಷ್ಡ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂಬ ಬಗ್ಗೆಯೂ ಸಮಿತಿ ನಿರ್ದೇಶನ ನೀಡುವುದು ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ, ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್‌, 28 ಮುಖ್ಯಮಂತ್ರಿಗಳು, ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್, ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌, ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ, ಹಲವು ರಾಜ್ಯಪಾಲರು, ಬಹುತೇಕ ಎಲ್ಲ ಕೇಂದ್ರ ಸಚಿವರು ಈ ಸಮಿತಿಯಲ್ಲಿ ಇದ್ದಾರೆ ಎಂದು ಮೂಲಗಳು ಹೇಳಿವೆ.

ADVERTISEMENT

ವಿರೋಧ ಪಕ್ಷಗಳ ಮುಖಂಡರಾದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಮುಲಾಯಂ ಸಿಂಗ್‌ ಯಾದವ್, ಮಾಯಾವತಿ ಅವರೂ ಸಮಿತಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.