ADVERTISEMENT

ಸೈನಿಕ್ ಶಾಲೆಗಳಲ್ಲಿ ಬಾಲಕಿಯರ ಪ್ರವೇಶಕ್ಕೆ ಅನುಮತಿ

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದಾಖಲಾತಿ ಆರಂಭ

ಪಿಟಿಐ
Published 10 ಮಾರ್ಚ್ 2021, 17:01 IST
Last Updated 10 ಮಾರ್ಚ್ 2021, 17:01 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ‘ದೇಶದಾದ್ಯಂತ ಇರುವ ಎಲ್ಲ ಸೈನಿಕ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ 2021–22ರಿಂದಲೇ ಬಾಲಕಿಯರು ಪ್ರವೇಶ ಪಡೆಯಬಹುದು’ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ದೇಶದಾದ್ಯಂತ ಒಟ್ಟು 33 ಸೈನಿಕ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ.

‘2018–19ರಲ್ಲಿ ಮಿಜೋರಾಂನ ಚಿಂಗ್‌ಚಿಪ್‌ ಸೈನಿಕ ಶಾಲೆಯಲ್ಲಿ ಪ್ರಾಯೋಗಿಕವಾಗಿ ಬಾಲಕಿಯರ ಪ್ರವೇಶ ಯೋಜನೆಯು ಆರಂಭಗೊಂಡಿತ್ತು. ಈ ಯೋಜನೆಯು ಯಶಸ್ವಿಯಾದ ನಂತರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ದೇಶದ ಎಲ್ಲಾ ಸೈನಿಕ ಶಾಲೆಗಳಲ್ಲಿ ಬಾಲಕರೊಂದಿಗೆ ಬಾಲಕಿಯರಿಗೆ ಪ್ರವೇಶ ನೀಡಲು ಸರ್ಕಾರ ನಿರ್ಧರಿಸಿದೆ’ ಎಂದು ಲೋಕಸಭೆಯಲ್ಲಿ ಬುಧವಾರ ರಕ್ಷಣಾ ಖಾತೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಮಾಹಿತಿ ನೀಡಿದ್ದಾರೆ.

ADVERTISEMENT

‘ಸರ್ಕಾರೇತರ ಸ್ವಯಂಸೇವಾ ಸಂಸ್ಥೆಗಳು, ಖಾಸಗಿ ಶಾಲೆಗಳು ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶದಲ್ಲಿ ಸೈನಿಕ ಶಾಲೆಗಳನ್ನು ಸ್ಥಾಪಿಸುವ ಕುರಿತು ಕೇಂದ್ರ ಸರ್ಕಾರ ಹೊಸ ಯೋಜನೆಯೊಂದನ್ನು ತರಲು ಚಿಂತನೆ ನಡೆಸಿದೆ’ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.