ADVERTISEMENT

ಸ್ಮಾರ್ಟ್‌ ಸಿಟಿ ಯೋಜನೆಯ ಗಡುವು ಒಂದು ವರ್ಷ ವಿಸ್ತರಣೆ

ಪಿಟಿಐ
Published 1 ಮೇ 2023, 18:26 IST
Last Updated 1 ಮೇ 2023, 18:26 IST
ಕಬ್ಬನ್‌ ಪಾರ್ಕ್‌ನಲ್ಲಿ ‘ಸ್ಮಾರ್ಟ್‌ ಸಿಟಿ’ ಯೋಜನೆ
ಕಬ್ಬನ್‌ ಪಾರ್ಕ್‌ನಲ್ಲಿ ‘ಸ್ಮಾರ್ಟ್‌ ಸಿಟಿ’ ಯೋಜನೆ   

ನವದೆಹಲಿ: ದೇಶದ ವಿವಿಧ ನಗರಗಳಲ್ಲಿ ಅನುಷ್ಠಾನಗೊಂಡಿರುವ ಸ್ಮಾರ್ಟ್‌ ಸಿಟಿ ಮಿಷನ್‌ನ ಕಾಲಾವಧಿಯನ್ನು ಕೇಂದ್ರ ಸರ್ಕಾರವು 2024ರ ಜೂನ್‌ವರೆಗೆ ವಿಸ್ತರಿಸಿದೆ.

ಈ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ, ಗಡುವು ವಿಸ್ತರಿಸಬೇಕು ಎಂಬ ಒತ್ತಾಯ ರಾಜ್ಯಗಳಿಂದ ಕೇಳಿಬಂದಿತ್ತು.

ಈ ವರ್ಷದ ಜೂನ್‌ ಅಂತ್ಯಕ್ಕೆ ಯೋಜನೆಯಡಿ ಕಾಮಗಾರಿಗಳ ಪೂರ್ಣಕ್ಕೆ ಗಡುವು ನಿಗದಿಯಾಗಿತ್ತು. ಈಗ ಮತ್ತೊಂದು ವರ್ಷ ವಿಸ್ತರಿಸಲಾಗಿದೆ. 2015ರ ಜೂನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ 100 ನಗರಗಳ ಸಮಗ್ರ ಅಭಿವೃದ್ಧಿಗಾಗಿ ಸ್ಮಾರ್ಟ್‌ ಸಿಟಿ ಯೋಜನೆಗೆ ಚಾಲನೆ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.