ADVERTISEMENT

ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ನಿರ್ಧಾರ: ಜಿಲೇಬಿ ಹಂಚಿ ರೈತರ ಸಂಭ್ರಮಾಚರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ನವೆಂಬರ್ 2021, 8:52 IST
Last Updated 19 ನವೆಂಬರ್ 2021, 8:52 IST
   

ನವದೆಹಲಿ: ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡುತ್ತಿದ್ದಂತೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.

ಗುರುನಾನಕ್ ಜಯಂತಿಯಂದೇ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ನಿರ್ಧಾರ ಘೋಷಣೆಯು ಪಂಜಾಬ್, ಹರಿಯಾಣ ರೈತರ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು.

ದೆಹಲಿ–ಉತ್ತರ ಪ್ರದೇಶದ ಗಾಜಿಪುರ ಗಡಿಯಿಂದ ದೆಹಲಿ–ಹರಿಯಾಣದ ಸಿಂಘು ಗಡಿವರೆಗೆ ಪ್ರತಿಭಟನಾ ಸ್ಥಳದಲ್ಲಿ ರೈತರು ಜಿಲೇಬಿ ಹಂಚುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಬುಟ್ಟಿಗಳಲ್ಲಿ ಸಿಹಿ ಪದಾರ್ಥಗಳನ್ನು ತುಂಬಿಕೊಂಡು ಹಂಚುತ್ತಿರುವ ದೃಶ್ಯ ಸುದ್ದಿ ವಾಹಿನಿಗಳ ದೃಶ್ಯದಲ್ಲಿ ಕಾಣಬಹುದಾಗಿದೆ.

ADVERTISEMENT

ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತು ಆರಂಭಿಸಿದ ಮೋದಿ, ರೈತರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಈ ಕಾಯ್ದೆಗಳನ್ನು ತರಲಾಗಿತ್ತು. ಅವಿರತ ಪ್ರಯತ್ನದ ಹೊರತಾಗಿಯೂ ಕೃಷಿ ಕಾಯ್ದೆಗಳ ಬಗ್ಗೆ ಒಂದು ವರ್ಗದ ರೈತರ ಮನವೊಲಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ಕಾಯ್ದೆಗಳನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ರೈತ ಮಿತ್ರರು ಪ್ರತಿಭಟನೆ ಕೈಬಿಟ್ಟು ತಮ್ಮ ಊರುಗಳಿಗೆ ತೆರಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಿ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.