ನವದೆಹಲಿ: ನಾಗಾಲ್ಯಾಂಡ್‌ನ ಇಡೀ ಪ್ರದೇಶವನ್ನು ಪ್ರಕ್ಷುಬ್ದ ಪ್ರದೇಶವೆಂದುಘೋಷಿಸಲಾಗಿದೆ.
ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ–ಆಫ್‌ಸ್ಪ ಅಡಿ ಈ ಘೋಷಣೆ ಮಾಡಿದ್ದು ಡಿಸೆಂಬರ್ 30 ರಿಂದ ಮತ್ತೆ ಆರು ತಿಂಗಳವರೆಗೆ ಆಫ್‌ಸ್ಪ ವಿಸ್ತರಿಸಲಾಗಿದೆಎಂದು ಕೇಂದ್ರ ಸರ್ಕಾರ ಹೇಳಿದೆ.
ಗೃಹ ವ್ಯವಹಾರಗಳ ಸಚಿವಾಲಯ ಗುರುವಾರ ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದೆ.
ನಾಗಾಲ್ಯಾಂಡ್‌ನ ವಿವಾದಾತ್ಮಕ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ಯನ್ನು ಹಿಂಪಡೆಯುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದ ಕೆಲವು ದಿನಗಳ ನಂತರ ಕೇಂದ್ರ ಈ ನಿರ್ಧಾರ ಪ್ರಕಟಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.