ADVERTISEMENT

ಲಿಂಗತ್ವ ಅಲ್ಪಸಂಖ್ಯಾತರಿಗೆ ವಿಶೇಷ ಗುರುತಿನ ಚೀಟಿ: ಕೇಂದ್ರ ಚಿಂತನೆ

ಸರ್ಕಾರದ ಯೋಜನೆಗಳಿಗೆ ಕಾರ್ಡ್ ಲಿಂಕ್ ಮಾಡುವ ಆಶಯ

ಪಿಟಿಐ
Published 18 ಅಕ್ಟೋಬರ್ 2020, 14:21 IST
Last Updated 18 ಅಕ್ಟೋಬರ್ 2020, 14:21 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸಮಾಜ ಕಲ್ಯಾಣ ಯೋಜನೆಗಳ ಸಹಾಯ ಪಡೆಯಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ವಿಶೇಷ ಗುರುತಿನ ಚೀಟಿ ರೂಪಿಸಲು ಚಿಂತನೆ ನಡೆಸುತ್ತಿದೆ ಎಂದು ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಮಂಡಳಿಯ (ಎನ್‌ಸಿಟಿಪಿ) ಸದಸ್ಯೆ ಮೀರಾ ಪರೀದಾ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಆಗಸ್ಟ್ ತಿಂಗಳಿನಲ್ಲಿ ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಮಂಡಳಿಯನ್ನು ರಚಿಸಿದೆ. ಈಚೆಗಷ್ಟೇ ಸಾಮಾಜಿಕ ನ್ಯಾಯ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ಮಂಡಳಿಯ ಮೊದಲ ಸಭೆಯಲ್ಲಿ ನಡೆದಿದೆ.

ಈ ಸಭೆಯಲ್ಲಿ ಭಾಗವಹಿಸಿದ್ದ ಮೀರಾ, ‘ಸಭೆಯಲ್ಲಿ ಸಮುದಾಯದ ಮುಖ್ಯ ಬೇಡಿಕೆಯಾಗಿದ್ದ ವಿಶೇಷ ಗುರುತಿನ ಚೀಟಿ ರೂಪಿಸುವ ಕುರಿತು ಚರ್ಚಿಸಲಾಯಿತು. ಈ ಚೀಟಿಯನ್ನು ಸಮಾಜ ಕಲ್ಯಾಣ ಯೋಜನೆಗಳಿಗೆ ಜೋಡಿಸುವ (ಲಿಂಕ್) ಕುರಿತೂ ಚರ್ಚಿಸಲಾಯಿತು. ಆದರೆ, ಈ ಯೋಜನೆಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಪ್ರತ್ಯೇಕ ಮಂಡಳಿ ರಚಿಸಿದ ಮೊದಲ ದೇಶ ಭಾರತವಾಗಿದ್ದು, ಈ ಸಮುದಾಯಕ್ಕೆ ಅಂಟಿರುವ ಸಾಮಾಜಿಕ ಕಳಂಕವನ್ನು ನಿವಾರಣೆ ಮಾಡಿ, ಅವರನ್ನು ಅಭಿವೃದ್ದಿಯತ್ತ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದೆ’ ಎಂದು ಓಡಿಶಾದ ಬಿಜೆಡಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮೀರಾ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.