ADVERTISEMENT

ನಿಗದಿಯಂತೆ ‘ನೀಟ್‌’: ಭಾರತಿ ಪ್ರವೀಣ್ ಪವಾರ್

ಪಿಟಿಐ
Published 23 ಜುಲೈ 2021, 16:34 IST
Last Updated 23 ಜುಲೈ 2021, 16:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮತ್ತು ಇತರ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು (ಸಿಇಟಿ) ಕೈಬಿಡುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಆರೋಗ್ಯ ಇಲಾಖೆಯ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ.

ವೈದ್ಯಕೀಯ ಸ್ನಾತಕೋತ್ತರ ಮತ್ತು ಸ್ನಾತಕ ಪದವಿಯ ‘ನೀಟ್‌’ ಪರೀಕ್ಷೆಗಳು ಕ್ರಮವಾಗಿ ಈ ವರ್ಷದ ಸೆಪ್ಟೆಂಬರ್‌ 11 ಮತ್ತು 12ರಂದು ನಡೆಯಲಿವೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಕೋವಿಡ್‌ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.