ADVERTISEMENT

ಚಾಲನಾ ಪರವಾನಗಿ ಅವಧಿ ಡಿ.31ಕ್ಕೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2020, 15:12 IST
Last Updated 24 ಆಗಸ್ಟ್ 2020, 15:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಚಾಲನಾ ಪರವಾನಗಿ ಅವಧಿ ಫೆ.1ಕ್ಕೆ ಮುಕ್ತಾಯಗೊಂಡಿದ್ದರೂ, ಅದರ ಮಾನ್ಯತೆಯನ್ನುಡಿಸೆಂಬರ್‌ 31ರವರೆಗೆ ವಿಸ್ತರಿಸಲಾಗಿದೆಎಂದುಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ಕೋವಿಡ್‌ ಕಾರಣ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ.ಪರವಾನಗಿ ಮತ್ತು ವಾಹನ ದಕ್ಷತಾ ಪ್ರಮಾಣ ಪತ್ರ ನವೀಕರಣ ವಿನಾಯಿತಿಯನ್ನು ಎಲ್ಲರಿಗೂ ನೀಡಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಟ್ವೀಟ್‌ ಮಾಡಿದ್ದಾರೆ.

ಮೋಟಾರು ವಾಹನ ಕಾಯ್ದೆ ಮತ್ತು ಕೇಂದ್ರ ವಾಹನ ನಿಯಮಕ್ಕೆ ಸಂಬಂಧಿಸಿದ ದಾಖಲೆಗಳ ಸಿಂಧುತ್ವದ ಅವಧಿ ವಿಸ್ತರಿಸಿರುವ ಮಾಹಿತಿಯನ್ನುರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ತಿಳಿಸಿದೆ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.